ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಿಹಾಲ ಮಾಳಿ ನವೋದಯ ಶಾಲೆಗೆ ಆಯ್ಕೆಯಾಗಿದ್ದಕ್ಕಾಗಿ ಸನ್ಮಾನಿಸಲಾಯಿತು. 
ಜಿಲ್ಲೆ

ಸತತ ಪ್ರಯತ್ನವೇ ಸಾಧನೆಯ ರಹಸ್ಯ

Vijayapura - Desk - Shamarao Kulkarni

ರೇವತಗಾಂವ: ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಿಹಾಲ್​ ಶ್ರಿಶೈಲ ಮಾಳಿ 2024&25 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯದದಲ್ಲಿ ಪ್ರವೇಶ ಪಡೆದ ಕಾರಣ ಶಾಲೆ ವತಿಯಿಂದ ಸನ್ಮಾನಿಸಲಾಯಿತು.

ಮುಖ್ಯೋಪಾಧ್ಯಾಯ ಆರ್​.ಎನ್​.ಹತ್ತಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಓದುವಾಗಲೇ ಸ್ಪರ್ಧಾತ್ಮಕ ಪರೀೆಗಳತ್ತ ಒಲವು ಬೆಳೆಸಿಕೊಳ್ಳಬೇಕು. ಸರಳ ಗ್ರಹಿಕೆಗೆ ಒತ್ತು. ಸ್ನೇಹಿತರ ವಲಯದಲ್ಲಿ ಚರ್ಚೆ, ಸತತ ಪ್ರಯತ್ನವೇ ಸಾಧನೆಯ ರಹಸ್ಯವಾಗಿದೆ ಎಂದು ಹೇಳಿದರು.

ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.