ಜಿಲ್ಲೆ

ಹೆಸರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ

ಹುಬ್ಬಳ್ಳಿ: 2025-26ನೇ ಸಾಲಿನಲ್ಲಿ ಹುಬ್ಬಳ್ಳಿ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಹೆಸರು ಪ್ರಸ್ತುತ ಕಟಾವು ಹಂತದಲ್ಲಿದೆ. ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹೆಸರು ಬೆಳೆ ಕಟಾವು ಕಾರ್ಯ ಕೈಗೊಳ್ಳಲು ಸಾಧ್ಯವಾಗದೇ ಕಾಳುಗಳು ಕಾಯಿಯಲ್ಲಿಯೇ ಮೊಳಕೆ ಒಡೆಯುತ್ತಿವೆ. ಪ್ರಧಾನ ಮಂತ್ರಿ ಕರ್ನಾಟಕ ರೈತ ಸುರಕ್ಷಾ ಫಸಲ್ ಬಿಮಾ ಯೋಜನೆಯಡಿ ಹೆಸರು ಬೆಳೆಗೆ ನೊಂದಾಯಿಸಿದ ರೈತರು (ವಿಮೆ ತುಂಬಿದ ರೈತರು) ಸ್ಥಳೀಯ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಆಗುವ ನಷ್ಟ ಪರಿಹಾರಕ್ಕಾಗಿ ಆಗಸ್ಟ್ 22ರೊಳಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಜತೆಗೆ ಬೆಳೆವಿಮೆ ನೋಂದಣಿ ಪ್ರತಿ, ಉತಾರ್ ಹಾಗೂ ಬ್ಯಾಂಕ್ ಪಾಸ್​ಬುಕ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಅಥವಾ ತಾಲೂಕಿನ ವಿಮಾ ಸಂಸ್ಥೆ ಪ್ರತಿನಿಧಿ ಬಿರೇಶ ವಡ್ಡರ ಅವರನ್ನು ಸಂರ್ಪಸುವಂತೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ ಪ್ರಕಟಣೆಯಲ್ಲಿ ಕೋರಿದ್ದಾರೆ.