ಹುಬ್ಬಳ್ಳಿ: ಇಲ್ಲಿಯ ಅಮರಗೋಳ ಎಪಿಎಂಸಿ ಆವರಣದ ವ್ಯಾಪಾರಸ್ಥರ ಸಂಘದಲ್ಲಿ ಶ್ರೀ ಗಜಾನನ ಉತ್ಸವ ಸಮಿತಿ ವತಿಯಿಂದ ಸಿಂಹಾಸನಾರೂಢ ಗಣಪತಿ ಪ್ರತಿಷ್ಠಾಪಿಸಲಾಗಿದ್ದು, ಸೆ. 12ರಂದು ಮಹಾಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಮೂರುಸಾವಿರ ಮಠದ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಭಕ್ತರು ಆಗಮಿಸಿ ದರ್ಶನ ಪಡೆದು, ಪ್ರಸಾದ ಸ್ವೀಕರಿಸಬೇಕೆಂದು ಸಂಘದ ಪ್ರಕಟಣೆ ಕೋರಿದೆ.