ಜಿಲ್ಲೆ

ಬೆಳಗ್ಗೆಯಿಂದಲೇ ಹುಬ್ಬಳ್ಳಿ ಧಾರವಾಡ ಅವಳಿನಗರ ಬಂದ್

Dharwada - Basavaraj Idli

ಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಷಾ ಅವರು ಡಾ. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಗುರುವಾರ ಕರೆ ನೀಡಿರುವ ಅವಳಿನಗರ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.

ಬೆಳಗ್ಗೆಯಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಹೊರ ಜಿಲ್ಲೆಗಳ ಕೆಲ ಬಸ್ ಗಳು ಹುಬ್ಬಳ್ಳಿಗೆ ಬರುತ್ತಿರುವುದು ಮಾತ್ರ ಕಂಡು ಬಂದವು.

ಆಟೊಗಳು ಕಡಿಮೆ ಸಂಖ್ಯೆಯಲ್ಲಿವೆ. ಎಪಿಎಂಸಿ ವಹಿವಾಟು ಇರಲಿಲ್ಲ. ಬಂದ್ ಹಿನ್ನಲೆಯಲ್ಲಿ ರೈತರು ಫಸಲು ತಂದಿಲ್ಲ. ನಗರದಲ್ಲಿ ಜನರ ಓಡಾಟ ಕಡಿಮೆ ಇದೆ.