ಬಾಗಲಕೋಟೆ: ಬೇಸಿಗೆ ಆರಂಭದಲ್ಲೇ ಅಗ್ನಿ ಆಕಸ್ಮಿಕ ಪ್ರಕರಣಗಳು ಒಂದರ ಮೇಲೊಂದು ವರದಿಯಾಗಿದ್ದು, ಇದೀಗ ಸಚಿವ ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆ ಆವರಣದಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಜ್ವಾಲೆಯನ್ನು ನಂದಿಸಲು ಸುಮಾರು 8 ಅಗ್ನಿಶಾಮಕ ವಾಹನಗಳನ್ನು ತರಿಸಿಕೊಳ್ಳಬೇಕಾಯಿತು.
ಜಮಖಂಡಿ ತಾಲೂಕಿನ ಹಿಪ್ಪರಗಿ ಬಳಿ ಇರುವ ಸಾಯಿ ಪ್ರಿಯಾ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆ ಆವರಣದಲ್ಲಿ ಕೂಡಿಟ್ಟಿದ್ದ ಬಯೋವೇಸ್ಟ್ ರಾಶಿಗೆ ಬೆಂಕಿಬಿದ್ದಿದ್ದು, ಅಗ್ನಿಜ್ವಾಲೆ ಧಗಧಗಿಸಿ ಉರಿದಿದೆ.
ಇದನ್ನೂ ಓದಿ: ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ
ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರಿಂದ, 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಪರಿಣಾಮವಾಗಿ ಬೆಂಕಿ ಹತೋಟಿಗೆ ಬಂದಿದ್ದರಿಂದ ಸಂಭಾವ್ಯ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.