ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ವಿಶು ಶೆಟ್ಟಿ ಮಾತನಾಡಿದರು. 
ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಮಾನವೀಯ ಗುಣ ಅವಶ್ಯ

ಇಂದಿರಾ ಎನ್ ಕೆ

ಶಿರ್ವ: ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಹೇಳಿದರು.

ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕದ ಸಹಯೋಗದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸೇವಾ ಯೋಜನಾ ದಿನ ಮತ್ತು ಗಾಂಧಿಜಯಂತಿ ದಿನದ ಅಂಗವಾಗಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮಾತನಾಡಿ, ಸ್ವಚ್ಛತೆ ಮತ್ತು ಸಾಮಾಜಿಕ ಜವಾಬ್ದಾರಿ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ನಮ್ಮ ಪರಿಸರ ಸ್ವಚ್ಛತೆಯಿಂದ ಕೂಡಿದರೇ ಇಡೀ ದೇಶವೇ ಸ್ವಚ್ಛತೆವಾಗಿರಲಿದೆ. ಹೀಗಾಗಿ ಪ್ರತಿಯೊಬ್ಬರು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.

ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಉಪಸ್ಥಿತರಿದ್ದರು. ಈ ಸಂದರ್ಭ ಸಂಸ್ಥೆಯ ಸಹಾಯಕ ಹಾಸ್ಟೆಲ್ ವಾರ್ಡನ್ ರಾಜೇಶ್ ಅವರನ್ನು ಸನ್ಮಾನಿಸಲಾಯಿತು. ಮಾನ್ಯ ಪಾಟ್ಕರ್, ಪ್ರಿಯದರ್ಶಿನಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ಸಚಿನ್ ಪ್ರಭು ವಂದಿಸಿದರು.