ಜಿಲ್ಲೆ

ಮಾನವೀಯ ಮೌಲ್ಯ ಅಳವಡಿಸಿಕೊಳ್ಳಲಿ

ಪ್ರಶಾಂತ ಹೂಗಾರ

ಚಿಕ್ಕೋಡಿ: ವಿದ್ಯಾರ್ಥಿಗಳು ಸಮಯ ಸದುಪಯೋಗ ಪಡಿಸಿಕೊಂಡಾಗ ಗುರಿ ತಲುಪಲು ಸಾಧ್ಯ ಎಂದು ಸದಲಗಾ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವೀರೇಶ ಪಾಟೀಲ ಹೇಳಿದರು.

ಪಟ್ಟಣದ ಜಿಎಸ್‌ಇ ಸಂಸ್ಥೆಯ ಎಸ್.ಬಿ.ಮಗದುಮ್ಮ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು ಎಂದರು.

ಜಿಎಸ್‌ಇ ಸಂಸ್ಥೆಯ ಅಧ್ಯಕ್ಷ ಎಸ್.ಬಿ.ಮಗದುಮ್ಮ ಮಾತನಾಡಿ, ಸತತ ಅಧ್ಯಯನ ಮತ್ತು ಪರಿಶ್ರಮದಿಂದ ಹೆಚ್ಚು ಅಂಕ ಗಳಿಸಲು ಸಾಧ್ಯ ಎಂದರು.

ವಿ.ಬಿ.ಹಳ್ಳೋಳ್ಳಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಪ್ರವೀಣ ಘೋಸರವಾಡೆ, ವಿ.ಬಿ.ಅಕ್ಕೋಳೆ, ಎಂ.ಎಸ್. ಪಾಟೀಲ, ಎಸ್.ಎಸ್.ಪಾಟೀಲ, ಆರ್.ಎಚ್. ಪಾಟೀಲ, ಆರ್.ಕೆ.ಮಾಯನ್ನವರ, ಎಸ್.ಎನ್.ಹುಕ್ಕೇರಿ ಇತರರಿದ್ದರು.