ಜಿಲ್ಲೆ

ಪತಿ ಮದ್ಯ ಸೇವನೆ ಬಿಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಪತಿ ಮದ್ಯ ಸೇವನೆ ಬಿಡಲಿಲ್ಲವೆಂದು ಬೇಸತ್ತ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಳಗೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಪ್ರೇಮಾ ಬಸಪ್ಪ ತೆಗ್ಗಿನ (45) ಮೃತ ಮಹಿಳೆ.
ಇವರ ಪತಿ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸತ್ತ ಪ್ರೇಮಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.