ಹೂವಿನಹಡಗಲಿ: ಹೊನ್ನೂರು ಸಮೀಪ ಗೂಡ್ಸ್ ವಾಹನ ಪಲ್ಟಿಯಾಗಿ ಸವಾರ ಭಾನುವಾರ ಮೃತಪಟ್ಟಿದ್ದಾರೆ. ಬಿಹಾರ ಮೂಲದ ಸುನೀಲ್ (25) ಮೃತ.
ಸಿಂಗಟಾಲೂರು ಏತನೀರಾವರಿ ಯೋಜನೆ ಬ್ಯಾರೇಜ್ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಹೊನ್ನೂರು ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಜಮೀನಿನಲ್ಲಿ ಬಿದ್ದಿದೆ. ಸುನೀಲ್ ವಾಹನದ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಾಹನದಲ್ಲಿದ್ದ ಇತರ ನಾಲ್ವರನ್ನು ಸ್ಥಳೀಯರು ಪಶು ಇಲಾಖೆಯ ವಾಹನದಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಸಿಪಿಐ ದೀಪಕ್ ಬೂಸರೆಡ್ಡಿ, ಪಿಎಸ್‌ಐ ಮಣಿಕಂಠ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.