ಹೂವಿನಹಡಗಲಿ: ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಆಗ್ರಹಿಸಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿಯವರು ಫೋನ್ ಕದ್ದಾಲಿಕೆ ಮಾಡುವಲ್ಲಿ ನೈಪುಣ್ಯತೆ ಪಡೆದಿದ್ದಾರೆ. ಈ ಮೂಲಕವೇ ಅಧಿಕಾರ ಪಡೆದು ಸರ್ಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣ ಮುಚ್ಚಿ ಹಾಕಲು ಕಾಂಗ್ರೆಸ್‌ನವರು ಫೋನ್ ಕದ್ದಾಲಿಕೆ ಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿಕೆ ನೀಡುತ್ತಿದ್ದಾರೆ. ಸಚಿವರಿಗೆ ಇದು ಶೋಭೆಯಲ್ಲ. ಕೂಡಲೇ ಫೋನ್ ಕದ್ದಾಲಿಕೆ ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು.