ಹೂವಿನಹಡಗಲಿ: ಸೋಗಿ ಶ್ರೀ ಬೆಟ್ಟದ ಮಲ್ಲೇಶ್ವರಸ್ವಾಮಿ ರಥೋತ್ಸವ ಬುಧವಾರ ಅದ್ದೂರಿಯಾಗಿ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ಮಲ್ಲೇಶ್ವರಸ್ವಾಮಿಗೆ ಬೆಳಗ್ಗೆಯಿಂದಲೇ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ತಂದು ರಥದ ಸುತ್ತಲೂ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವ ಆರಂಭವಾಯಿತು. ಹರಪನಹಳ್ಳಿ, ಕೊಟ್ಟೂರು ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.