ಜಿಲ್ಲೆ

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಜೂನ್‌ನಲ್ಲಿ ಲಘು ಮೋಟಾರ್ ವಾಹನ ಚಾಲನೆ, ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಹಾಗೂ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಮತ್ತು ಜುಲೈನಲ್ಲಿ ಸೋಲಾರ್ ಟೆಕ್ನಿಶಿಯನ್ ಉಚಿತ ತರಬೇತಿ ಆಯೋಜಿಸಿದೆ.

ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಸ್ವವಿವರದ ಮಾಹಿತಿಯನ್ನು ಮೇ 25ರೊಳಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು ಅಥವಾ www.rsetihaliyal.org ಮೂಲಕ ಅರ್ಜಿ ಸಲ್ಲಿಸಬಹುದು.