ಜಿಲ್ಲೆ

ನಾನು ನನ್ನ ಜೀವನದಲ್ಲಿ ಯಾವುದೇ ಅಕ್ರಮ ಎಸಗಿಲ್ಲ; ಕುಮಾರಸ್ವಾಮಿ|No illegality

Bengaluru - Political - Vilas Melagiri

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ(I have not committed any crime in my life). ಬಿಡದಿ ಬಳಿ 40 ವರ್ಷ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ(H D Kumaraswamy) ಹೇಳಿದರು.

ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ ಎಂದು ದೂರಿದರು.

ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು ಲೂಟಿ ಮಾಡುತ್ತಿದೆ. ದೇಶದ ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಈ ರೀತಿ ಪ್ರಕರಣಕ್ಕೆ ಎಸ್‌ಐಟಿ ರಚನೆ ಮಾಡಿದ್ದಾರೆ. ಇಂತಹ ನಡವಳಿಕೆಗಳಿಗೆ ಒಂದಲ್ಲ ಒಂದು ದಿನ ಬೇರೆ ರೀತಿಯ ಉತ್ತರ ಬರುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಅಗಿದ್ದೇನೆ. ನನ್ನ ಬಿಟ್ಟರೆ ಯಾರು ಇಲ್ಲ ಈ ಸರ್ಕಾರಕ್ಕೆ. ಸದ್ಯ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತಿದ್ದೇನೆ. 40 ವರ್ಷದ ಹಿಂದೆ ಖರೀದಿ ಮಾಡಿದ ಈ ಭೂಮಿಗೆ ನೂರು ಬಾರಿ ತನಿಖೆಯಾಗಿದೆ. 40 ವರ್ಷದಿಂದಲೂ ತನಿಖೆ ನಡೆಯುತ್ತಲೇ ಇದೆ. ನನ್ನ ಪರಿಸ್ಥಿತಿಯೇ ಹೀಗಾದರೆ ಜನ ಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು? ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರದ ನಡವಳಿಕೆ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.