ಜಿಲ್ಲೆ

ಟಿಕೆಟ್ ಹಪಾಹಪಿ ನನಗಿಲ್ಲ-ನಿಖಿಲ್ ಕುಮಾರಸ್ವಾಮಿ

Dharwada - Santosh Vaidya

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ಚನ್ನಪಟ್ಟಣ ವಿಧಾನ ಸಭೆ ಉಪ ಚುನಾವಣೆ ಟಿಕೆಟ್ ಹಪಾಹಪಿ ನನಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಎನ್​ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಹಿತಾಸಕ್ತಿಯಿಂದ ದೇವೇಗೌಡರು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಫಲಿತಾಂಶದ ಮೂಲಕ ರಾಜ್ಯದ ಜನತೆ ಈ ಮೈತ್ರಿಯನ್ನು ಒಪ್ಪಿಕೊಂಡಿದ್ದಾರೆ ಎಂದರು.

ಉಪ ಚುನಾವಣೆ ಘೊಷಣೆಯಾಗಿರುವ ಮೂರು ವಿಧಾನಸಭೆ ಕ್ಷೇತ್ರಗಳ ಬಗ್ಗೆ ಕೇಂದ್ರ ಬಿಜೆಪಿ ವರಿಷ್ಠರು ಈಗಾಗಲೇ ವರದಿ ತರಿಸಿಕೊಂಡಿದ್ದಾರೆ. ಶಿಗ್ಗಾಂವ ಸವಣೂರು ಹಾಗೂ ಸಂಡೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗಳು ಯಾರೇ ಆಗಲಿ, ಅವರ ಗೆಲುವಿಗೆ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.