ವಿಜಯಪುರ : ಹಿರಿಯ ಐಎಎಸ್ ಅಧಿಕಾರಿ ಮತ್ತು ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್. ಪಾಟೀಲ ಅವರು ವೃಕ್ಷೋತ್ಥಾನ್ ಹೆರಿಟೇಜ್ ರನ್ನಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸುವ ಮೂಲಕ ಅಧಿಕಾರಿ ವರ್ಗಕ್ಕೆ ಸ್ಪೂರ್ತಿಯಾಗಿದ್ದಾರೆ.
ನಗರದಲ್ಲಿ ಡಿ. 22 ರಂದು ನಡೆಯಲಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್&2024 ಮ್ಯಾರಾಥಾನ್ನಲ್ಲಿ 5 ಕಿಮೀ. ಓಟದಲ್ಲಿ ವೈ.ಎಸ್. ಪಾಟೀಲರು ಹೆಸರು ನೋಂದಣಿ ಮಾಡಿದ್ದಾರೆ. ಈ ಮುಂಚೆ ವಿಜಯಪುರ ಉಪವಿಭಾಗಾಧಿಕಾರಿಯಾಗಿ ಮತ್ತು ನಂತರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಅವರು ಸದ್ಯ ತೋಟಗಾರಿಕೆ ಇಲಾಖೆಯ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.