ಜಿಲ್ಲೆ

ಹುಡೇದಮನಿ ದಂಪತಿಗೆ ಆದರ್ಶ ದಂಪತಿ ಪುರಸ್ಕಾರ

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಿಕ್ಷಕ ದಿನೋತ್ಸವ ಸಂದರ್ಭದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿವಗಂಗಾ, ವೀರಪ್ಪ್ಪ ರಾಮಾಪುರ ದತ್ತಿ ನಿಮಿತ್ತ ಶಿಕ್ಷಣ, ಸಾಮಾಜಿಕ ಕ್ಷೇತ್ರದ ಗಣನೀಯ ಸೇವೆಗೆ ನೀಡುವ 2024ನೇ ಸಾಲಿನ ಆದರ್ಶ ಶಿಕ್ಷಕ ದಂಪತಿ ಪುರಸ್ಕಾರಕ್ಕೆ ತಹಮೀನಾ ಹಾಗೂ ಎಸ್​.ಎಂ. ಹುಡೇದಮನಿ ಶಿಕ್ಷಕ ದಂಪತಿ ಆಯ್ಕೆಯಾಗಿದ್ದಾರೆ.
ಸೆ. 12ರಂದು ಸಂಜೆ 6 ಗಂಟೆಗೆ ವಿದ್ಯಾವರ್ಧಕ ಸಂಘದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.