ಕಡಬ: ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ-ಅಟ್ಟೆಮಿ ಪರ್ಬ ಆಚರಿಸಲಾಯಿತು.
ಪೆರುವಾಜೆ ಶ್ರೀ ಜಲದುರ್ಗಾ ದೇವಸ್ಥಾನದ ಮಾಜಿ ಅಧ್ಯಕ್ಷ ಉಮೇಶ್ ಕೆ.ಎಂ.ಬಿ, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸುವ ಶಿಕ್ಷಣದೊಂದಿಗೆ ಸಂಸ್ಕಾರ ದೊರೆತಾಗ ವಿದ್ಯಾರ್ಥಿ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗುತ್ತಾನೆ. ಹಿರಿಯರ ಉತ್ತಮ ವಿಚಾರಗಳನ್ನು ತಮ್ಮ ಜೀವನದಲ್ಲಿ ಬೆಳೆಸಿಕೊಂಡು, ಕೃಷ್ಣ ಸಂದೇಶ ಅಳವಡಿಸಿಕೊಂಡಾಗ ಆದರ್ಶ ಜೀವನ ನಡೆಸಲು ಸಾಧ್ಯ ಎಂದರು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿ, ಶ್ರೀ ಕೃಷ್ಣನ ಬಾಲ್ಯ ಜೀವನದ ಮೌಲ್ಯಗಳನ್ನು ಮಕ್ಕಳೆಲ್ಲರೂ ಬೆಳೆಸಿಕೊಂಡು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಪ್ರಜೆಯಾಗಬೇಕೆಂದರು.
ಅಟ್ಟೆಮಿ ಪರ್ಬದ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್ ಸ್ವಾಗತಿಸಿದರು. ವ್ಯವಸ್ಥಾಪಕ ರಮೇಶ್ ರೈ ಆರ್.ಬಿ ವಂದಿಸಿದರು. ಸಹಶಿಕ್ಷಕರಾದ ರಾಧಾಕೃಷ್ಣ ಬಿ, ಸ್ವಾತಿ, ತೀರ್ಥ ಕಾರ್ಯಕ್ರಮ ನಿರೂಪಿಸಿದರು.