ಬಳ್ಳಾರಿ ತಾಲೂಕಿನ ಶಿಡಿಗಿನಮೊಳ ಗ್ರಾಮದಲ್ಲಿ ಹಾವು ಕಡಿತದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ.ಮರಿಯಂಬಿ, ಗ್ರಾಪಂ ಸದಸ್ಯ ಗಾದಿಲಿಂಗನಗೌಡ, ಸಾಂಕ್ರಮಿಕ ರೋಗ ತಜ್ಞರಾದ ಡಾ.ವಿಶಾಲಾಕ್ಷಿ, ಎಂ.ಸಿಂಧು, ನವೀನ, ಶಿವಕುಮಾರ, ಸವಿತಾ ಇತರರಿದ್ದರು. 
ಜಿಲ್ಲೆ

ಹಾವು ಕಚ್ಚಿದಾಗ ತಕ್ಷಣ ಆಸ್ಪತ್ರೆಗೆ ಸೇರಿಸಿ

ಗಾಯತ್ರಿ ಮಾಲಿಪಾಟೀಲ್

ಬಳ್ಳಾರಿ: ಹಾವು ಕಡಿತಕ್ಕೆ ಒಳಗಾದವರನ್ನು ಗಾಬರಿಗೊಳಿಸದೆ ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ.ಮರಿಯಂಬಿ ಹೇಳಿದರು.

ಶಿಡಿಗಿನಮೊಳ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಹಾವು ಕಡಿತ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯ. ಆದರೆ, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ವಿಷಕಾರಿ ಹಾವು ಕಡಿದಾಗ ವ್ಯಕ್ತಿಯನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲು ಮೊದಲ ಆದ್ಯತೆ ನೀಡಬೇಕು ಎಂದರು.

ವೈದ್ಯಾಧಿಕಾರಿ ಸಂತೋಷ ಹೆಬ್ಬಾಳ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯವನ್ನು ಸುಡುವುದು, ನಾಟಿ ಔಷಧಿ ನೀಡುವುದು ಮಾಡಬೇಡಿ ಎಂದು ಹೇಳಿದರು. ನಂತರ ನಾಯಿ ಕಡಿತ, ಬೇಸಿಗೆ ಹಿನ್ನೆಲೆಯಲ್ಲಿ ಶುದ್ಧ ನೀರಿನ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.