ಜಿಲ್ಲೆ

ಮಕ್ಕಳು ಕಲಿತರೆ ಬಡತನ ದೂರ

Avinash R

ಉಪ್ಪಿನಂಗಡಿ: ಪ್ರತಿ ಮಗುವಿನಲ್ಲಿ ಪ್ರತಿಭೆ ಇದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿ. ಕಲಿಯುವ ಮಕ್ಕಳನ್ನು ಪ್ರಕಾಶಿಸುವಂತೆ ಮಾಡಿ, ತನ್ಮೂಲಕ ಕುಟುಂಬದ ಬಡತನ ದೂರ ಮಾಡಲು ಸಾಧ್ಯ ಎಂದು ಯು.ಟಿ.ಖಾದರ್ ಹೇಳಿದರು.

ಗೋಳಿತ್ತಟ್ಟು ದ.ಕ. ಜಿ.ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ನೆನಪಿಗಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕೊಠಡಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್ ಮಾತನಾಡಿ, ಸರ್ಕಾರ ಶಿಕ್ಷಣ ಇಲಾಖೆಯ ಅಭಿವೃದ್ಧಿ ಬಹಳಷ್ಟು ಯೋಜನೆಗಳನ್ನು ರೂಪಿಸಿದ್ದು, ಬಡವರ ಮಕ್ಕಳ ಕಲಿಕೆಗೆ ಬಹಳಷ್ಟು ಸಹಕಾರಿ ಆಗಿದೆ ಎಂದರು.

ಗೋಳಿತ್ತಟ್ಟು ಗ್ರಾಪಂ ಅಧ್ಯಕ್ಷೆ ಸವಿತಾ ಅಧ್ಯಕ್ಷತೆವಹಿಸಿದ್ದರು. ಉಪಾಧ್ಯಕ್ಷ ಬಾಬು ಪೂಜಾರಿ, ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ದನ ಗೌಡ, ಗ್ರಾಪಂ ಸದಸ್ಯರಾದ ಜೀವಿತಾ, ಗುಲಾಬಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಶಾಹುಲ್ ಹಮೀದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗೋಪಾಲ ಗೌಡ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ, ಉಪಾಧ್ಯಕ್ಷ ನಾಸಿರ್ ಸಮರಗುಂಡಿ, ಕೋಶಾಧಿಕಾರಿ ಜನಾರ್ದನ ಗೌಡ, ಸ್ಥಳೀಯ ಪ್ರಮುಖರಾದ ಅಬ್ದುಲ್ಲ ಕುಂಞ್, ಅಜಿತ್ ಕುಮಾರ್ ಪಾಲೇರಿ, ಕೆ.ಕೆ.ಇಸ್ಮಾಯಿಲ್, ನಝೀರ್ ಮಠ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಸ್ವಾಗತಿಸಿ, ವಂದಿಸಿದರು. ಶಿಕ್ಷಕ ಅಬ್ದುಲ್ ಲತೀಫ್ ಕಾರ‌್ಯಕ್ರಮ ನಿರೂಪಿಸಿದರು.