ಜಿಲ್ಲೆ

ಶ್ರೀರಾಮುಲು ಕಾಂಗ್ರೆಸ್​ಗೆ ಬಂದರೆ ಪಕ್ಷಕ್ಕೆ ಮತ್ತಷ್ಟು ಶಕ್ತಿ

ಹುಬ್ಬಳ್ಳಿ : ವಾಲ್ಮೀಕಿ ಸಮಾಜದ ಪ್ರಬಲ ನಾಯಕರಾದ ಮಾಜಿ ಸಚಿವ ಬಿ. ಶ್ರೀರಾಮುಲು ಕಾಂಗ್ರೆಸ್​ಗೆ ಬಂದರೆ ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ಅವರು ನಮ್ಮ ಜಿಲ್ಲೆಯವರು, ನನ್ನ ಸ್ನೇಹಿತ ಕೂಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಲಾಡ್, ಬಡವರ ಬಗ್ಗೆ ಕಳಕಳಿ ಇರುವ ಶ್ರೀರಾಮುಲು ಕಾಂಗ್ರೆಸ್​ಗೆ ಬಂದರೆ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತಾಗುತ್ತದೆ. ಅವರು ಬೇರೆ ಪಕ್ಷದಲ್ಲಿದ್ದರು ಸಹ ಅವರೊಂದಿಗೆ ಆತ್ಮೀಯವಾಗಿದ್ದೇನೆ. ಅವರ ಬಗ್ಗೆ ಸಾಕಷ್ಟು ಗೌರವ ಇದೆ ಎಂದರು.

ಶ್ರೀರಾಮುಲು ಅವರನ್ನು ಕಾಂಗ್ರೆಸ್​ಗೆ ಸ್ವಾಗತಿಸುವ ಬಗ್ಗೆ ಅವರೊಂದಿಗೆ ನಾನು ಮಾತನಾಡಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅಥವಾ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿರಬಹುದು ಎಂದು ಹೇಳಿದರು.

ಇಡೀ ದೇಶದಲ್ಲಿ ಮೈಕ್ರೋ ಪೈನಾನ್ಸ್ ಬಂದ್ ಮಾಡಬೇಕು. ಕರ್ನಾಟಕ ಅಷ್ಟೇ ಅಲ್ಲ, ಇಡೀ ದೇಶದ ಜನರು ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಕಾಯಂ ಆಗಿ ಬಂದ್ ಮಾಡುವ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.