ಮೈಸೂರು: ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಸಂವಿಧಾನವನ್ನು ಅರ್ಥಮಾಡಿಕೊಳ್ಳದ ಹೊರತು ಅದರ ಆಶಯಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಹೇಳಿದರು.
ಜಿಲ್ಲ್ಲಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದಿಂದ ಶುಕ್ರವಾರ ಮಹಾರಾಜ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಸಮ್ಮೇಳನದಲ್ಲಿ ‘ಸಂವಿಧಾನ ಓದು’ ವಿಷಯ ಕುರಿತು ಮಾತನಾಡಿ, ಪ್ರತಿಯೊಬ್ಬರು ಸಂವಿಧಾನವನ್ನು ಓದುವ ಮೂಲಕ ಅದರ ಆಶಯ ಜಾರಿಗೆ ತರಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತಿ ಹೊಂದಿದ್ದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ನಿಂಗೇಗೌಡ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಮಹದೇವ, ಉಮೇಶ್, ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಇತರರಿದ್ದರು.