ರಾಮನಗರ: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್, ಮಿತ್ರ ಡಿಎಂಕೆಯನ್ನು ಒಪ್ಪಿಸಿದರೆ ಕೇಂದ್ರ ಸರ್ಕಾರವನ್ನು ಒಪ್ಪಿಸುವ ಜವಾಬ್ದಾರಿ ನಮ್ಮದು ಎನ್ನುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಶನಿವಾರ ಚುನಾವಣಾ ಪ್ರಚಾರದ ವೇಳೆ ಮುಕುಂದ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟಿಗೆ ಅನುಮತಿ ಕೊಡಿಸಿದರೆ, ಮೂರೇ ವರ್ಷದಲ್ಲಿ ಅಣೆಕಟ್ಟು ನಿರ್ವಾಣ ವಾಡುತ್ತೇವೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಅವರ ಮಿತ್ರಪಕ್ಷ ಕ್ಯಾತೆ ತೆಗೆದಿದೆ. ಅದರ ಬಗ್ಗೆ ಅವರು ಮೊದಲು ಬಾಯಿ ತೆರೆಯಲಿ. ಡಿಎಂಕೆಯನ್ನು ಒಪ್ಪಿಸಿದರೆ ಖಂಡಿತವಾಗಿ, ನಾವು ಕೇಂದ್ರದಿಂದ ಅನುಮತಿ ಕೊಡಿಸುತ್ತೇವೆ ಎಂದರು.
ಶಾಲೆಗೆ 25 ಎಕರೆ ದಾನ ನೀಡೀದ್ದೇನೆ ಎಂಬ ಡಿಕೆ ಶಿವಕುವಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕುವಾರಸ್ವಾಮಿ, ಅಷ್ಟು ಜಮೀನು ಕೊಡಲಿಕ್ಕೆ ಅವರೇನು ಮಹಾರಾಜರ ವಂಶಸ್ಥರಾ?, ಅವರು ಎಲ್ಲಿ ಜಮೀನು ಕೊಟ್ಟಿದ್ದಾರೆ?, ಕೊಟ್ಟಿದ್ದರೆ ದಾಖಲೆ ಸಮೇತ ಜನರಿಗೆ ತಿಳಿಸಲಿ, ನಾನೂ ಸಂತೋಷ ಪಡುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು. ನಾನು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಎಷ್ಟೆಲ್ಲ ಅಭಿವೃದ್ಧಿ ವಾಡಿದ್ದೇನೆ ಎಂಬುದು ಜನತೆಗೆ ಗೊತ್ತಿದೆ ಎಂದರು.
ನಾನು ಸಿಎಂ ಆಗುವ ಮೊದಲು ರಾಜ್ಯದಲ್ಲಿ ಎಷ್ಟು ಕಾಲೇಜು, ಹೈಸ್ಕೂಲ್‌ಗಳು ಇದ್ದವು?, ನನ್ನ 20 ತಿಂಗಳ ಆಡಳಿತದಲ್ಲಿ ಎಷ್ಟಾದವು ಎಂಬುದಕ್ಕೆ ದಾಖಲೆಗಳೇ ವಾಹಿತಿ ಕೊಡುತ್ತವೆ. ಯಾರಾದರೂ ತೆಗೆದು ನೋಡಬಹುದು. ಶಿಕ್ಷಣ ಕ್ಷೇತ್ರಕ್ಕೆ ಈ ವ್ಯಕ್ತಿಯ ಕೊಡುಗೆ ಏನು? ಸಾತನೂರು, ಕನಕಪುರ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಏನು ವಾಡಿದ್ದಾರೆಂಬ ಪಟ್ಟಿ ವಾಡಲಿ. ಇಷ್ಟು ವರ್ಷ ಆಡಳಿತ ವಾಡಿರುವವರಿಗೆ ಅವರ ತವರೂರು ದೊಡ್ಡಾಲಹಳ್ಳಿಯಲ್ಲಿ ಮತಗಳ ಲೀಡ್ ಬರುತ್ತಿಲ್ಲ ಏಕೆ?, ಇವರು 25 ಎಕರೆ ಕೊಟ್ಟಿದ್ದಾರೋ ಅಥವಾ 25 ಗುಂಟೆ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಜನ ಸೇವಕನಾಗಿ ಕೆಲಸ ವಾಡುತ್ತಿದ್ದೇನೆ ಎಂದರು.
ಕಡಲೆಕಾಯಿ ಅಲ್ಲ... ಸರ್ಕಾರವನ್ನೇ ಕಿತ್ತೆಸೆಯುತ್ತೇವೆ ಎಂದಿದ್ದೇವೆ
ಸರ್ಕಾರ ಕಿತ್ತೊಗೆಯುವುದು ಎಂದರೆ ಕಡಲೆಕಾಯಿ ಕಿತ್ತ ಹಾಗಲ್ಲ ಎಂಬ ಡಿಕೆಶಿ ಹೇಳಿಕೆಗೆ ಮಾರುತ್ತರ ನೀಡಿದ ಎಚ್‌ಡಿಕೆ, ನಾವು ಕಡಲೆಕಾಯಿ ಗಿಡ ಕೀಳುತ್ತೇವೆ ಎಂದಿಲ್ಲ. ಸರ್ಕಾರವನ್ನೇ ಕಿತ್ತೊಗೆಯುತ್ತೇವೆ ಎಂದಿರೋದು. ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬುದು ಜನರ ಆಸೆ. ಜನರ ಭಾವನೆಯನ್ನಷ್ಟೇ ದೇವೇಗೌಡರು ಹೇಳಿದ್ದಾರೆ ಎಂದರು.
ನಿಖಿಲ್ ಗೆಲುವು ಖಚಿತ
ಚನ್ನಪಟ್ಟಣ ಕ್ಷೇತ್ರದಲ್ಲಿ ಜನರ ಒಲವು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುವಾರಸ್ವಾಮಿ ಪರವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿಭಿನ್ನ ಪಕ್ಷಗಳಿಂದ ಐದು ಬಾರಿ ಶಾಸಕರಾಗಿ ವಾಡಿದ ಕೆಲಸವನ್ನು ಜನರು ನೋಡಿದ್ದಾರೆ. ಈಗ ಒಬ್ಬ ಯುವಕ ಸ್ಪರ್ಧೆ ವಾಡಿದ್ದಾನೆ, ಆತನನ್ನು ಒಮ್ಮೆ ನೋಡೋಣ ಎಂದು ಜನರು ವಾತನಾಡಿಕೊಳ್ಳುತ್ತಿದ್ದಾರೆ. ಈ ಬಾರಿ 122 ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದೇನೆ. ನಿಖಿಲ್ 190 ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದಾರೆ. ದೇವೇಗೌಡರು, ಬಿಜೆಪಿ ನಾಯಕರು ಕಾಂಗ್ರೆಸ್ ದಾಳಿ ತಡೆಯಲು ಒಟ್ಟಾಗಿ ಕೆಲಸ ವಾಡುತ್ತಿದ್ದಾರೆ. ಹೀಗಾಗಿ ನಿಖಿಲ್ ಗೆಲ್ಲುವುದು ಖಚಿತ ಎಂದು ಎಚ್‌ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.