ಜಿಲ್ಲೆ

ಪರಿಸರ ಉಳಿದರೆ ನಾಡು ಸುಭೀಕ್ಷ

ಜಿ.ಹೆಚ್. ಧನ್ಯಕುಮಾರ್

ತರೀಕೆರೆ: ಪರಿಸರ ಉಳಿದರೆ ನಾಡು ಸುಭೀಕ್ಷ ಎಂದು ಎಸಿ ಡಾ.ಕೆ.ಜೆ.ಕಾಂತರಾಜ್ ಹೇಳಿದರು.

ತಾಲೂಕಿನ ಬಾವಿಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಸಸಿ ನೆಟ್ಟು ಮಾತನಾಡಿ, ವಿದ್ಯಾರ್ಥಿಗಳು ಕಲಿಕಾ ಹಂತದಿಂದಲೇ ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕಲ್ಲದೇ, ಜೀವ ವೈವಿಧ್ಯತೆಯನ್ನು ಮತ್ತಷ್ಟು ಸಮೃದ್ಧಿಗೊಳಿಸಲು ಪ್ರಯತ್ನಿಸಬೇಕು ಎಂದರು.

ಶಾಲೆಯಲ್ಲಿ ಅನುಷ್ಠಾನಗೊಳಿಸಿರುವ ಸ್ಮಾರ್ಟ್‌ಕ್ಲಾಸ್, ಗ್ರಂಥಾಲಯ ಹಾಗೂ ಪ್ರಯೋಗಾಲಯಕ್ಕೆ ಭೇಟಿ ನೀಡಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಿದರಲ್ಲದೇ, ಶಿಕ್ಷಕರ ವೃತ್ತಿತತ್ವರತೆಯನ್ನು ಶ್ಲಾಘಿಸಿದರು.

ಮುಖ್ಯಶಿಕ್ಷಕ ಟಿ.ಎಸ್.ಗಣೇಶ್ ಮಾತನಾಡಿ, ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ಮೂಲಕ ಕಲಿಕೆ ಮತ್ತು ಭೋದನೆ ಪ್ರಕ್ರಿಯೆ ಪರಿಣಾಮಕಾರಿಯಾಗಿದ್ದು, ಇದರಿಂದ ಫಲಿತಾಂಶದ ಮೇಲೆ ಗುಣಾತ್ಮಕ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳು ಶಾಲೆಯಲ್ಲಿ ಲಭ್ಯವಿರುವ ಸೌಲಭ್ಯ ಬಳಸಿಕೊಂಡು ಮುಂದಿನ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಮತ್ತಿತರರಿದ್ದರು.