ಇಂಡಿ : ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ತೊಗರಿ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡು ಬಂದಲ್ಲಿ ಬೆಳೆ ವಿಮೆ ನೋಂದಣಿ ಮಾಡಿದ ರಶೀದಿ, ಜಿಪಿಎಸ್ ಪೋಟೊದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಅಥವಾ ಓರಿಯಂಟಲ್ ವಿಮಾ ಸಂಸ್ಥೆಯ ಪ್ರತಿನಿಧಿಗೆ ನ.30ರೊಳಗೆ ನೀಡಲು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಚನಬಸಪ್ಪ ಝಳಕಿ 63603 29378 ಸಂಪರ್ಕಿಸಬಹುದು.