ಜಿಲ್ಲೆ

ಪೈಪ್ ಒಡೆದಿದ್ದರೆ ತಕ್ಷಣ ಸರಿಪಡಿಸಿ

ಅವಿನಾಶ್ ಜೈನಹಳ್ಳಿ

ನೀರು ಸರಬರಾಜು ಮಾಡುವ ಮೊದಲು ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ ಸ್ಥಳಕ್ಕೆ ಅಧಿಕಾರಿಗಳ ತಂಡ ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಸೂಚನೆ ನೀಡಿದ್ದಾರೆ.

ಕುಡಿಯುವ ನೀರಿನ ಪೈಪುಗಳು ರಸ್ತೆ, ಚರಂಡಿಗಳ ಮೂಲಕ ಹಾದುಹೋಗಿ ಒಡೆದಿದ್ದರೆ ತಕ್ಷಣ ಸರಿಪಡಿಸಬೇಕು. ಇಲ್ಲದಿದ್ದರೆ ಒಡೆದ ಪೈಪ್‌ನಿಂದ ಸೋರಿಕೆಯಾದ ನೀರು ಕಲುಷಿತ ನೀರಿನೊಂದಿಗೆ ಬೆರೆಯುವ ಸಂಭವವಿರುವುದರಿಂದ ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.