ಚಿಕ್ಕಮಗಳೂರು ತಾಲೂಕಿನ ಕಡಬಗೆರೆಯ ಗ್ರಾಮದಲ್ಲಿ ಖಾಂಡ್ಯ ಹೋಬಳಿ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. 
ಜಿಲ್ಲೆ

ಅಂಬೇಡ್ಕರ್ ಮಾತು ಆಲಿಸಿದರೆ ಬದುಕಿನ ಹಾದಿ ಸುಗಮ

ಚಿಕ್ಕಮಗಳೂರು: ಜೀವನದಲ್ಲಿ ನೀವು ಎಂದಾದರೂ ದಣಿದಿದ್ದರೆ ಅಥವಾ ಜಿಗುಪ್ಸೆ ಹೊಂದಿದ್ದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರೇರಣಾದಾಯಕ ಮಾತುಗಳು ಆಲಿಸಿ ಮುನ್ನೆಡೆದರೆ ಬದುಕಿನ ಹಾದಿ ಸುಗಮವಾಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ತಾಲೂಕಿನ ಕಡಬಗೆರೆಯ ಗ್ರಾಮದಲ್ಲಿ ಖಾಂಡ್ಯ ಹೋಬಳಿ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಅಂಬೇಡ್ಕರ್ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮಾತ್ರ ಮೀಸಲಾತಿ ನೀಡಿಲ್ಲ. ದೇಶದ ಎಲ್ಲ ಸಮುದಾಯಗಳಿಗೂ ಮೀಸಲಾತಿ ಕಲ್ಪಿಸಿದ್ದಾರೆ ಎಂಬುದನ್ನು ನಾವು ಮನದಟ್ಟು ಮಾಡಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಭಾರತ ಮಾತ್ರವಲ್ಲ ಇಡೀ ವಿಶ್ವವೇ ಒಪ್ಪಿದೆ ಎಂದು ಹೇಳಿದರು.
ಇಂಥ ಮಹಾನ್ ನಾಯಕನ ಜಯಂತಿ ಆಚರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ನಾವೆಲ್ಲರೂ ಹೋರಾಟ ಮಾಡಬೇಕಿದೆ. ಹೀಗಾಗಿ ಸಂವಿಧಾನ ಬೆಳವಣಿಗೆಗೆ ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಸಹಕರಿಸಬೇಕು ಎಂದರು.
ಸಾಮಾಜಿಕ ಹೋರಾಟಗಾರ್ತಿ ಕೆ.ಸಿ.ಅಕ್ಷತಾ ಮಾತನಾಡಿ, ಧರ್ಮ, ದೇವರು, ಜಾತಿ ಹಾಗೂ ಕೋಮುವಾದದ ಹೆಸರಿನಲ್ಲಿ ದೇಶವನ್ನು ಒಡೆಯಲಾಗುತ್ತಿದೆ. ನಮ್ಮದು ಜಾತ್ಯತೀತ ರಾಷ್ಟç., ಸಂವಿಧಾನ ಸಾಂತAತ್ರö್ಯ, ಸಮಾನತೆ, ಸಹೋದರತೆ ನೀಡಿದ್ದು ಎಲ್ಲರಿಗೂ ಸಮಪಾಲು, ಸಮಬಾಳು ಹಾಗೂ ಸಹಬಾಳ್ವೆಯ ಸಂದೇಶ ನೀಡಿದೆ ಎಂದರು.
ಇತ್ತೀಚೆಗೆ ಕೆಲವರು ಸಂವಿಧಾನ ಬದಲಾಯಿಸುವ ವಿಚಾರ ಪ್ರಸ್ತಾಪಿಸುತ್ತಿದ್ದಾರೆ . ಸಂವಿಧಾನ ಉಳಿದರಷ್ಟೇ ದೇಶ ಉಳಿಯುತ್ತದೆ. ಪ್ರಜಾಪ್ರಭುತ್ವ ಉಳಿದರೆ ಜನತಂತ್ರ ಉಳಿಯುತ್ತದೆ . ಜನತಂತ್ರಕ್ಕೆ ಅಪಾಯ ಬಾರದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಸಂಸ ಹೋಬಳಿ ಅಧ್ಯಕ್ಷ ಬಿ.ಕೆ.ರಮೇಶ್ ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ಭಾರತೀಯರ ಪಾಲಿಗೆ ಸಾರ್ವಕಾಲಿಕ ಸಕಾಲಿಕ ಎನ್ನಬಹುದು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತನೆ ಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ಎಂದು ತಿಳಿಸಿದರು.
ಇದೇ ವೇಳೆ ಕಡಬಗೆರೆಯಲ್ಲಿ ಅಂಬೇಡ್ಕರ್ ಪ್ರತಿಮೆ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಒತ್ತಾ ಯಿಸಿ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಮುಖಂಡರುಗಳು ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಎಸ್.ಪೇಟೆ ಸತೀಶ್, ದಲಿತ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಮಂಜುನಾಥ್ ಕೂದುವಳ್ಳಿ, ಗಿರೀಶ್ ಮತ್ತಿತರರಿದ್ದರು.