ಉಳ್ಳಾಲ: ಉಳ್ಳಾಲದಲ್ಲಿ ಶಾಂತಿ ಮತ್ತು ಸ್ನೇಹಮಯ ವಾತಾವರಣ ನಿರ್ಮಿಸಲು ನಾವೆಲ್ಲರೂ ಕಟಿಬದ್ಧರಾಗಬೇಕು. ಉಳ್ಳಾಲ ಸೆಂಟ್ರಲ್ ಕಮಿಟಿ ಮುಂದಿನ ದಿನಗಳಲ್ಲಿ ಪ್ರತಿ ಮೊಹಲ್ಲದಲ್ಲೂ ವಿಸ್ತಾರವಾಗಬೇಕು, ಸಮಾಜದ ಕಟ್ಟಕಡೆಯ ಜನರಿಗೆ ನಿಮ್ಮಿಂದ ಸಹಕಾರವಾಗಬೇಕು ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾದ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದರು.
ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ವತಿಯಿಂದ ವಾಸ್ತಿಕಟ್ಟೆ ಆರಝಾದ್ ನಗರದಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದರು.
ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಮಾತನಾಡಿ, ಹಿಂದೆ ಮನೆಗಳು ದೂರವಾಗಿದ್ದರೂ ಮನಸ್ಸುಗಳು ಹತ್ತಿರವಾಗಿದ್ದವು. ಆದರೆ ಇಂದು ಮನೆಗಳು ಹತ್ತಿರವಾಗಿವೆ, ಮನಸ್ಸುಗಳು ದೂರವಾಗಿವೆ ಎಂದರು.
ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಅಧ್ಯಕ್ಷ ನವಾಝ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್, ಬಬ್ಬುಕಟ್ಟೆ ಹಿರಾ ಶಾಂತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎ.ಎಚ್.ಮಹ್ಮೂದ್, ಉಳ್ಳಾಲ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿಸೋಜ, ಉಳ್ಳಾಲ ನಗರಸಭೆ ಮಾಜಿ ಸದಸ್ಯರಾದ ಫಾರೂಕ್ ಉಳ್ಳಾಲ್, ಯು.ಎಚ್.ಫಾರೂಕ್, ಸೆಂಟ್ರಲ್ ಕಮಿಟಿ ಟ್ರಸ್ಟ್ ಗೌರವಾಧ್ಯಕ್ಷ ಮೊಹಮ್ಮದ್ ತ್ವಾಹ, ಉಸ್ತಾದ್ ಜಲೀಲ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.
ಜಲಾಲ್ ಮದನಿ ದುವಾ ನೆರವೇರಿಸಿದರು. ಮುಸ್ತಫ ಕಾರ್ಯಕ್ರಮ ನಿರೂಪಿಸಿದರು.