ರಾವೇಂದ್ರ ಕಾಪಸೆ 
ಜಿಲ್ಲೆ

ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಕಡೆಗಣನೆ

Vijayapura - Desk - Shamarao Kulkarni

ಹೋರ್ತಿ: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು, ಸರ್ಕಾರ ಈ ಚುನಾವಣೆ ಮಾಡಲು ಮನಸ್ಸು ಮಾಡುತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾವೇಂದ್ರ ಕಾಪಸೆ ಆಕ್ರೋಶ ವ್ಯಕ್ತಪಡಿಸಿದರು.

ಬುಧುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪದಲ್ಲಿರುವ ಕಾರ್ಯಕರ್ತರು ಹುದ್ದೆಗಳಿಂದ ವಂಚಿತರಾಗಿದ್ದಾರೆ. ಸ್ಥಳಿಯವಾಗಿ ಅಭಿವೃದ್ಧಿ ಕುಂಠಿತಗೊಂಡಿದೆ. ವಿಧಾನಸಭೆ, ಲೋಕಸಭೆ ಚುನಾವಣೆಗೆ ಕಾರ್ಯಕರ್ತರು ಬೇಕು, ನಿಶಾರ್ಥ ದುಡಿದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಕೊಡಲು ಯಾವ ಪಕ್ಷಗಳು ಮುಂದೆ ಬರುತ್ತಿಲ್ಲ ಎಂದು ದೂರಿದರು.

ತಾಲೂಕ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅನುಧಾನ ಅಧಿಕಾರಿಗಳಿಗೆ ಸೋರಿಕೆಯಾಗುತ್ತಿದೆ. ಹೀಗಾಗಿ ಎಲ್ಲ್ಲ ಪದ ಕಾರ್ಯಕರ್ತರು ಜಿಗುಪ್ಸೆ ಹೊಂದಿದ್ದಾರೆ. ಸರ್ಕಾರ ಶ್ರಿ ಸ್ಥಳಿಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.