ಜಿಲ್ಲೆ

ಅಕ್ರಮ ಪಡಿತರ ಅಕ್ಕಿ ವಶ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 4.87 ಲಕ್ಷ ರೂ. ಮೌಲ್ಯದ 211 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ತಾಲೂಕಿನ ಸಿರಿಗೇರಿ ಕ್ರಾಸ್‌ದಿಂದ ತೆಕ್ಕಲಕೋಟೆಗೆ ಸಂಚರಿಸಿದ್ದು ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 4.87 ಲಕ್ಷ ರೂ. ಮೌಲ್ಯದ ನಾಲ್ಕು ನೂರು ಮೂಟೆಗಳಲ್ಲಿ ಸಂಗ್ರಹಿಸಿದ್ದ 211 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.