ಭದ್ರಾವತಿ: ಟೆಂಪೊದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3,550 ಕೆ.ಜಿ. ಪಡಿತರ ಅಕ್ಕಿಯನ್ನು ಕಾಗದ ನಗರದ ಪೊಲೀಸರು ಶುಕ್ರವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧರಿಸಿ ನಗರದ ಬೈಪಾಸ್ ರಸ್ತೆಯಲ್ಲಿ ದಾಳಿ ನಡೆಸಿರುವ ಪೊಲೀಸರು ಟೆಂಪು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಅಕ್ಕಿ ಪಾಲಿಶ್‌ಗೆ ಕೊಡಲು ಕಡೂರಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎನ್ನಲಾಗಿದೆ. ವಶಕ್ಕೆ ಪಡೆದ ಅಕ್ಕಿ ಹಾಗೂ ವಾಹನವನ್ನು ಆಹಾರ ಇಲಾಖೆ ಅಽಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಕಾಗದನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕವಿತಾ, ಆಹಾರ ಇಲಾಖೆ ನಿರೀಕ್ಷಕ ರಾಜು, ಅಂಕಯ್ಯ, ಈಶ್ವರಪ್ಪ ಇತರರಿದ್ದರು.