ಸಾಂದರ್ಭಿಕ ಚಿತ್ರ 
ಜಿಲ್ಲೆ

ಪಡಿತರ ಅಕ್ಕಿ ಅಕ್ರಮ ಸಾಗಾಟ

ಇಂದಿರಾ ಎನ್ ಕೆ

ಗಂಗೊಳ್ಳಿ: ನಾಯಕವಾಡಿ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಗಂಗೊಳ್ಳಿ-ಮುಳ್ಳಿಕಟ್ಟೆ ರಸ್ತೆಯಲ್ಲಿ ಗೂಡ್ಸ್ ವಾಹನದಲ್ಲಿ ಕಾನೂನು ಬಾಹಿರವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಕುಂದಾಪುರ ತಾಲೂಕು ಆಹಾರ ನಿರೀಕ್ಷಕ ಸುರೇಶ ಎಚ್.ಎಸ್. ಅವರಿಗೆ ಬಂದ ಮಾಹಿತಿ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಯೊಂದಿಗೆ ಗಂಗೊಳ್ಳಿ-ಮುಳ್ಳಿಕಟ್ಟೆ ರಸ್ತೆಯಲ್ಲಿ ಗುಜ್ಜಾಡಿ ಗ್ರಾಮದ ಮಂಕಿ ಕ್ರಾಸ್ ಸಮೀಪ ನಾಯಕವಾಡಿ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ನಿಲ್ಲಿಸಿ ಪರಿಶೀಲಿಸಿದಾಗ ವಾಹನದಲ್ಲಿ 24 ಪಾಲಿಥಿನ್ ಚೀಲಗಳಲ್ಲಿ ಕುಚ್ಚಲಕ್ಕಿ ಹಾಗೂ 4 ಪಾಲಿಥಿನ್ ಚೀಲಗಳಲ್ಲಿ ಬೆಳ್ತಿಗೆ ಅಕ್ಕಿ ಪತ್ತೆಯಾಗಿದೆ. ಗೂಡ್ಸ್ ವಾಹನದಲ್ಲಿದ್ದ ಸುಮಾರು 1,390 ಕೆ.ಜಿ. ಅನ್ನಭಾಗ್ಯ ಯೋಜನೆ ಅಕ್ಕಿ ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಅಂಗಡಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.