ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿಯ ಕುವೆಂಪು ವೃತ್ತಕ್ಕೆ ಬುಧವಾರ ಆಗಮಿಸಿದ ಕ್ರಾಂತಿಕಾರಿ ರಥಯಾತ್ರೆಯನ್ನು ಡಾ.ಬಾಬು ಜಗಜೀವನ್ ರಾಮ್ ಜನಜಾಗೃತಿ ಅಭಿವೃದ್ದಿ ಸಂಘದ ಕಾರ್ಯಕರ್ತರು ಪುಷ್ಪಾರ್ಚನೆ ಮಾಡುವುದರೊಂದಿಗೆ ಬರಮಾಡಿಕೊಂಡರು. 
ಜಿಲ್ಲೆ

ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಗೊಳಿಸಿ

ಮಾದೇಶ್ ತಿ.ನರಸೀಪುರ

ಶ್ರೀರಂಗಪಟ್ಟಣ: ರಾಜ್ಯ ಸರ್ಕಾರ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿ ಮಾಡಬೇಕೆಂದು ಮಾದಿಗ ಸಮುದಾಯದ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸಿ.ಕೆ.ಪಾಪಯ್ಯ ಆಗ್ರಹಿಸಿದರು.

ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿಯ ಕುವೆಂಪು ವೃತ್ತಕ್ಕೆ ಬುಧವಾರ ಆಗಮಿಸಿದ ಕ್ರಾಂತಿಕಾರಿ ರಥಯಾತ್ರೆಯನ್ನು ಡಾ.ಬಾಬು ಜಗಜೀವನ್ ರಾಮ್ ಜನಜಾಗೃತಿ ಅಭಿವೃದ್ಧಿ ಸಂಘದ ಕಾರ್ಯಕರ್ತರೊಂದಿಗೆ ಪುಷ್ಪಾರ್ಚನೆ ಮೂಲಕ ಸ್ವಾಗತಿಸಿ ಬಳಿಕ ಮಾತನಾಡಿದರು.

ಕ್ರಾಂತಿಕಾರಿ ರಥಯಾತ್ರೆಯ ರೂವಾರಿ ಭಾಸ್ಕರ್ ಪ್ರಸಾದ್, ಡಾ.ಬಾಬು ಜಗಜೀವನ್ ರಾಮ್ ಜನಜಾಗೃತಿ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಅರಕೆರೆ ಸಿದ್ದರಾಜು ಹಾಗೂ ತಾಲೂಕು ಅಧ್ಯಕ್ಷ ಆಟೋ ಶಂಕರ್ ನೇತೃತ್ವದಲ್ಲಿ ಕಾರ್ಯಕರ್ತರು ಕ್ರಾಂತಿಕಾರಿ ರಥಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸ್ವರ್ಣ ಲೇಪಿತ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಡಾ.ಬಾಬು ಜಗಜೀವನ್ ರಾಮ್ ಜನಜಾಗೃತಿ ಅಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಟಿ.ರಂಗಯ್ಯ, ಉಪಾಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಶಿವಶಂಕರ್, ಖಜಾಂಚಿ ರವಿ, ಡಿಎಸ್‌ಎಸ್ ರಾಜ್ಯ ಸಂಚಾಲಕ ನಂಜುಂಡಮೌರ್ಯ, ಮುಖಂಡ ಮಂಡ್ಯ ಕೃಷ್ಣ ಇತರರು ಇದ್ದರು.