ಕೊಡಗು ಜಿಲ್ಲೆಯಲ್ಲಿ ಮನರೇಗಾ ಕಾಮಗಾರಿಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ ಅಭಿಯಂತರ ಸಿ.ಕೆ.ಮಲ್ಲಪ್ಪ ಸಲಹೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡ ಅವರು ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ನರೇಗಾ ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ನಂತರ ವಿರಾಜಪೇಟೆ, ಸೋಮವಾರಪೇಟೆ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮನರೇಗಾ ಯೋಜನೆಯಡಿ ನಿರ್ಮಾಣಗೊಂಡಿರುವ ಅಮೃತ್ ಸರೋವರ ಕೆರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಹಲವಾರು ತಾಂತ್ರಿಕ ವಿಷಯಗಳ ಕುರಿತು ಸಲಹೆ ಹಾಗೂ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ.ಧನರಾಜು, ಪಿಆರ್‌ಇಡಿ ಕಾರ್ಯಪಾಲಕ ಅಭಿಯಂತರ ನಾಗೇಂದ್ರಪ್ಪ, ಎ.ಇ.ಇ ಜವರೇಗೌಡ, ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಶೇಖರ್, ಅಪ್ಪಣ್ಣ, ಜಯಣ್ಣ, ಮನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಹೇಮಂತ್, ರವೀಶ್, ಶ್ರೀನಿವಾಸ್, ಮನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಗಳು ಇತರರು ಹಾಜರಿದ್ದರು.