ಜಿಲ್ಲೆ

ಕುಟುಂಬದ ನಿರ್ವಹಣೆಗೆ ಯೋಜನೆ ಜಾರಿ

ಉತ್ತರ ಕನ್ನಡ ಡೆಸ್ಕ್

ಮುಂಡಗೋಡ: ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೆ ನಾಲ್ಕು ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂದು ಮಾಜಿ ಶಾಸಕ ವಿ.ಎಸ್. ಪಾಟೀಲ ಹೇಳಿದರು.

ಪಟ್ಟಣ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಆಶ್ರಯದಲ್ಲಿ ಪಟ್ಟಣದ ವಿವೇಕಾನಂದ ಬಯಲು ರಂಗ ಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ 24 ಸಾವಿರ ಪಡಿತರ ಚೀಟಿದಾರರರಿದ್ದು, ಇಂದು 21361ಜನರಿಗೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ನಿರ್ವಹಣೆಗಾಗಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.

ತಹಸೀಲ್ದಾರ್ ಶಂಕರ ಗೌಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಶೇಖರ ಬಿ., ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮಹದೇವಪ್ಪ ಹ್ಯಾಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ದೀಪಾ ಬಂಗೇರ, ಪಟ್ಟಣ ಪಂಚಾಯಿತಿ ಸದಸ್ಯರು, ಸ್ಥಳಿಯ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.