ಜಿಲ್ಲೆ

ಎಂ.ಆರ್.ಐ ಸ್ಕ್ಯಾನಿಂಗ್ ಯಂತ್ರ ಅಳವಡಿಕೆ :ಶಾಸಕ ಡಾ.ಮಂತರ್ ಗೌಡ ಪರಿಶೀಲನೆ

ಆದರ್ಶ್. ಎಂ.ಕೆ.

ಮಡಿಕೇರಿ: ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ನೂತನ ಎಂ.ಆರ್.ಐ ಸ್ಕ್ಯಾನಿಂಗ್ ಯಂತ್ರದ ಅಳವಡಿಕೆ ಕಾರ್ಯ ಸಾಗಿದ್ದು, ಗುರುವಾರ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್(ಎಂ.ಆರ್.ಐ) ಸೇವೆಯು ಕೊಡಗಿನ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಿದೆ. ಈ ಸೇವೆಯಿಂದ ಕೀಲು ಮತ್ತು ಮೂಳೆ ಸಮಸ್ಯೆ, ಹೃದಯ ರಕ್ತನಾಳಗಳ ಕಾಯಿಲೆಗಳನ್ನು ಗುರುತಿಸಲು, ಸ್ತನ ಕ್ಯಾನ್ಸರ್ ಅಪಾಯವನ್ನು ಗುರುತಿಸಲು, ಎಂಡೊಮೆಟ್ರಿಯಾಸೀಸ್ ಮತ್ತು ವಿವಿಧ ರೋಗಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.