ರಾಯಚೂರಿನ ತಹಸೀಲ್ ಕಚೇರಿಯಲ್ಲಿ ಭೂ ದಾಖಲೆಗಳ ಡಿಜಿಟಲೀಕರಣಗೊಳಿಸುವ ಭೂ ಸುರಕ್ಷಾ ಯೋಜನೆಗೆ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಶನಿವಾರ ಚಾಲನೆ ನೀಡಿದರು. ಶಾಸಕ ಬಸನಗೌಡ ದದ್ದಲ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್, ತಹಸೀಲ್ದಾರ್ ಸುರೇಶ ವರ್ಮಾ ಇದ್ದರು. 
ಜಿಲ್ಲೆ

ದಾಖಲೆ ಗಣಕೀಕರಣ ಯೋಜನೆಗೆ ಚಾಲನೆ

ರಾಚಯ್ಯ ಸ್ವಾಮಿ

ರಾಯಚೂರು: ಕಂದಾಯ ಇಲಾಖೆಯಲ್ಲಿನ ದಾಖಲೆಗಳನ್ನು ಗಣಕೀಕರಣಗೊಳಿಸುವ ಯೋಜನೆಗೆ ಸ್ಥಳೀಯ ತಹಸೀಲ್ ಕಚೇರಿಯಲ್ಲಿ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಶನಿವಾರ ಚಾಲನೆ ನೀಡಿದರು.
ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಡಿಜಿ ಲಾಕರ್ ದಾಖಲೆಗಳನ್ನಾಗಿ ಪರಿವರ್ತನೆ ಮಾಡುವ ಮೂಲಕ ದಾಖಲೆ ಕೊಠಡಿಗಳಿಂದ ರೈತರು ದಾಖಲೆ ಪಡೆದುಕೊಳ್ಳಲು ಇರುವ ತೊಂದರೆ ನಿವಾರಣೆ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದಿರುವ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್, ತಹಸೀಲ್ದಾರ್ ಸುರೇಶ ವರ್ಮಾ ಉಪಸ್ಥಿತರಿದ್ದರು.