ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ರಮೇಶಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಶನಿವಾರ ಮನವಿ ಸಲ್ಲಿಸಲಾಯಿತು. ವೇದಿಕೆ ಅಧ್ಯಕ್ಷ ಖಲೀಲ್ ಪಾಷಾ, ಪದಾಕಾರಿಗಳಾದ ರಾಚಯ್ಯ ಸ್ವಾಮಿ, ಜಾರ್, ಮನ್ನನ್, ಾರೂಕ್, ಮರಿಲಿಂಗ, ಆನಂದ, ಗುರು, ನರಸಿಂಹಲು, ಗಣೇಶ, ಪಾಂಡುರಂಗ, ಖದೀರ್, ಮಹೆಬೂಬ್ ಇದ್ದರು. 
ಜಿಲ್ಲೆ

ಶಾಲೆಯಲ್ಲಿ ಮೂಲ ಸೌಕರ್ಯ ಸುಧಾರಿಸಿ

ರಾಚಯ್ಯ ಸ್ವಾಮಿ

ರಾಯಚೂರು: ಜಿಲ್ಲೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಮೊರಾರ್ಜಿ ದೇಸಾಯಿ ಸೇರಿದಂತೆ ಇನ್ನಿತರ ವಸತಿ ಶಾಲೆಯಲ್ಲಿನ ಮೂಲ ಸೌಕರ್ಯಗಳನ್ನು ಸುಧಾರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ವೇದಿಕೆ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ರಮೇಶಗೆ ಶನಿವಾರ ಮನವಿ ಸಲ್ಲಿಸಿ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ಪೂರೈಕೆಯಾಗುತ್ತಿರುವ ದೂರುಗಳು ಬರುತ್ತಿವೆ. ಸರ್ಕಾರಿ ಶಾಲೆಯ ಕೆಲ ಶಿಕ್ಷಕರು ಶಾಲೆಗೆ ಹೋಗದೆ ವೇತನ ಪಡೆಯುತ್ತಿದ್ದಾರೆ. ಕಾಲೇಜುಗಳಲ್ಲಿ ಅಗತ್ಯ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿಲ್ಲ.
ವಸತಿ ಶಾಲೆಗಳಲ್ಲಿ ಶಿಕ್ಷಕರು ಶಾಲೆಯಲ್ಲಿಯೇ ವಾಸವಿರಬೇಕು. ಆದರೆ ಬೇರೆಡೆ ವಾಸ ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಶಿಕ್ಷಕಕ್ಕೆ ಅಡ್ಡಿಯುಂಟಾಗುತ್ತಿದೆ. ಕೂಡಲೆ ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ವೇದಿಕೆ ಅಧ್ಯಕ್ಷ ಖಲೀಲ್ ಪಾಷಾ, ಪದಾಕಾರಿಗಳಾದ ರಾಚಯ್ಯ ಸ್ವಾಮಿ, ಜಾರ್, ಮನ್ನನ್, ಾರೂಕ್, ಮರಿಲಿಂಗ, ಆನಂದ, ಗುರು, ನರಸಿಂಹಲು, ಗಣೇಶ, ಪಾಂಡುರಂಗ, ಖದೀರ್, ಮಹೆಬೂಬ್ ಇದ್ದರು.