ಜಿಲ್ಲೆ

ಈಜುಕೊಳದಲ್ಲಿ ಯುವಕ ಸಾವು ಪ್ರಕರಣಕ್ಕೆ ತಿರುವು

ರಾಘವೇಂದ್ರಗೌಡ ಭೀ ಪಾಟೀಲ್

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮದ ಬಳಿಯ ಖಾಸಗಿ ರೆಸಾರ್ಟ್‌ಗೆ ಭಾನುವಾರ ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ಈಜುಕೊಳದಲ್ಲಿ ಮುಳುಗಿ ಯುವಕ ಮೃತಪಟ್ಟ ಪ್ರಕರಣ ಹೊಸ ತಿರುವು ಪಡೆದಿದೆ.

ಬೆಳಗಾವಿ ಖಾಸಬಾಗ ನಿವಾಸಿ ಮಹಾಂತೇಶ ಗುಂಜೀಕರ ಸಾವು ಅಸಹಜ ಸಾವಲ್ಲ.ಮಹಾಂತೇಶ ಸಾವಿನ ಬಗ್ಗೆ ಅನುಮಾನವಿದೆ ಎಂದು ಮೃತ ಯುವಕನ ಕುಟುಂಬಸ್ಥರು ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕುಟುಂಬಸ್ಥರ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸಿದ್ದು, ರೆಸಾರ್ಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ.