ಹರಪನಹಳ್ಳಿಯ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಬಿಇಒ ಬಸುವರಾಜಪ್ಪ ಉದ್ಘಾಟಿಸಿದರು. ಶಿಕ್ಷಕರ ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ್, ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ರಾಮಪ್ಪ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಎನ್.ಜಿ.ಮನೋಹರ, ಶಿಕ್ಷಣ ಸಂಯೋಜಕರಾದ ಕಬೀರನಾಯ್ಕ, ಲಕ್ಷ್ಮವ್ವ ರಂಗಣ್ಣನವರ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅರ್ಜುನ ಪರಸಪ್ಪ ಇದ್ದರು. 
ಜಿಲ್ಲೆ

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಸಹಕಾರಿ

Gangavati - Desk - Veeresh S Ullagaddi

ಹರಪನಹಳ್ಳಿ: ಪ್ರತಿಭಾ ಕಾರಂಜಿ ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಪೂರಕವಾಗಿದೆ ಎಂದು ಬಿಇಒ ಯು.ಬಸವರಾಜಪ್ಪ ಹೇಳಿದರು.


ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಭಾ ಕಾರಂಜಿಯಿಂದ ಮಕ್ಕಳ ಭೌತಿಕಮಟ್ಟ ಹೆಚ್ಚಳ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಮಕ್ಕಳ ಅಡಗಿರುವ ಪ್ರತಿಭೆ ಗುರುತಿಸಬೇಕಾಗಿದೆ. ತೀರ್ಪುಗಾರರು ನ್ಯಾಯ ಸಮ್ಮತವಾಗಿ ತೀರ್ಪು ನೀಡಬೇಕು ಎಂದರು.


ದೈಹಿಕ ಶಿಕ್ಷಣ ಪರಿವೀಕ್ಷಕ ಷಣ್ಮುಖಪ್ಪ ಮಾತನಾಡಿ, ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವೋತೋಮುಖ ಅಭಿವೃದ್ದಿಗೆ ಪೂರಕವಾಗಿವೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಎನ್ನದೆ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.


ಪ್ರೌಢ ಶಾಲಾ ವಿಭಾಗದ ಸ್ಪರ್ಧೆಗಳು ಬಾಲಕಿಯರ ಪ್ರೌಢ ಶಾಲೆಯಲ್ಲಿ, 5 ರಿಂದ 7ನೇ ತರಗತಿ ಮಕ್ಕಳಿಗೆ ಸ.ಪ.ಪೂ ಕಾಲೇಜು ಹಾಗೂ 1ರಿಂದ 4ನೇ ತರಗತಿ ಸ್ಪರ್ಧೆಗಳು ಕೆಸಿಎ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದವು. ಅಕ್ಷರ ದಾಸೋಹದ ಸಹಾಯಕ ನಿರ್ದೆಶಕ ಜಯರಾಜ ಮಾತನಾಡಿದರು. ಪತ್ತಿನ ಬ್ಯಾಂಕ್ ಅಧ್ಯಕ್ಷ ಹನುಮಂತನಾಯ್ಕ, ಲತಾ ರಾಥೋಡ, ಶಿಕ್ಷಕರ ಸಂಘದ ಕಾರ್ಯದರ್ಶಿ ಷರೀಪಮಕರಬ್ಬಿ, ಪ್ರಮುಖರಾದ ಆಂಜನೇಯ, ಗುರುಮೂರ್ತಿ, ಚಂದ್ರಪ್ಪ, ಪ್ರತಾಪ್, ಸಂಪನ್ಮೂಲ ವ್ಯಕ್ತಿಗಳು, ತೀರ್ಪುಗಾರರು ಇದ್ದರು.