ಜಿಲ್ಲೆ

ಮೈಯಲ್ಲಿ ಹುಷಾರಿಲ್ಲದ ಕಾರಣ ವಿಷ ಸೇವಿಸಿ ಆತ್ಮಹತ್ಯೆ

ಹಾವೇರಿ: ಮೈಯಲ್ಲಿ ಹುಷಾರಿಲ್ಲವೆಂದು ಬೇಸತ್ತು ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮಹೇಶ ಮೈಲಪ್ಪ ಕರಿಯಮ್ಮನವರ (36) ಮೃತ ವ್ಯಕ್ತಿ.
ಈತ ಮೈಯಲ್ಲಿ ಹುಷಾರಿಲ್ಲದ ಕಾರಣ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.