ಜಿಲ್ಲೆ

ದೇವಸ್ಥಾನಗಳಲ್ಲಿನ ಆಭರಣ ಕಳ್ಳತನ

Belagavi

ಯಮಕನಮರಡಿ: ಸಮೀಪದ ಹತ್ತರಗಿ ಹಾಗೂ ಕುರಣಿ ಗ್ರಾಮಗಳಲ್ಲಿನ ದೇವಸ್ಥಾನಗಳಲ್ಲಿ ಕಳ್ಳ ತನ ಮಾಡಲಾಗಿದೆ. ಹತ್ತರಗಿ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನದಲ್ಲಿ 1.10 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ಕುರಣಿವಾಡಿಯ ಶ್ರೀ ಪ್ರಭು ದೇವಸ್ಥಾನದಲ್ಲಿ 2.50 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ.

ಬೆಳಗಾವಿಯ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.