ಬುದ್ದಿನ್ನಿ ಗ್ರಾಮದ ಹೋಟೆಲ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿಯುತ್ತಿರುವುದು. 
ಜಿಲ್ಲೆ

ಹೋಟೆಲ್‌ನಲ್ಲಿ ಸಿಲಿಂಡರ್ ಸ್ಫೋಟ

ಮಸ್ಕಿ: ತಾಲೂಕಿನ ಸಾನಬಾಳ ಬುದ್ದಿನ್ನಿ ಗ್ರಾಮದ ಹೋಟೆಲ್‌ನಲ್ಲಿ ಶುಕ್ರವಾರ ಗ್ಯಾಸ್ ಸಿಲಿಂಡರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೋಟೆಲ್ ಮಾಲೀಕ ವೀರೇಶ ಅವರು ಸಿಲಿಂಡರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಹಕರನ್ನು ಹೊರಗೆ ಕಳಿಸಿದ್ದಾರೆ. ಜನ ಹೊರಬರುತ್ತಿದ್ದಂತೆ ಸಿಲಿಂಡರ್ ಸ್ಫೋಟವಾಗಿದ್ದು, ಅದರ ತೀವ್ರತೆಗೆ ಛಾವಣಿ ಹಾಗೂ ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿವೆ.

ಎಲ್ಲರೂ ಹೊರ ಬಂದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು.