ಕೋಟ: ಮರೆಯಾಗುತ್ತಿರುವ ಗ್ರಾಮೀಣ ಭಾಷೆ ಬದುಕಿನ ವಿಚಾರಧಾರೆ ಉಳಿಸುವ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಂಚವರ್ಣ ಮಹಿಳಾ ಮಂಡಲ ಅರ್ಥಪೂರ್ಣ ಕಾರ್ಯ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕಿ ಸ್ನೇಹಕೂಟದ ಭಾರತಿ ವಿ.ಮಯ್ಯ ಹೇಳಿದರು.
ಕೋಟ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಮಾರ್ಗದರ್ಶನದಲ್ಲಿ ಆಗಸ್ಟ್ 11ರಂದು ಹಂದಟ್ಟಿನ ಗೆಳೆಯರ ಬಳಗ ಸಭಾಂಗಣದಲ್ಲಿ ಆಸಾಡಿ ಒಡ್ರ್ ಊರ್ ಕೇರಿ ಬದ್ಕ್ ಶೀರ್ಷಿಕೆಯಡಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿ ಗ್ರಾಮೀಣ ಕ್ರೀಡಾಕೂಟ ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೋಟತಟ್ಟು ಗ್ರಾಪಂ ಕಾರ್ಯದರ್ಶಿ ಸುಮತಿ ಅಂಚನ್, ಹಂದಟ್ಟು ಮಹಿಳಾ ಬಳಗ ಅಧ್ಯಕ್ಷೆ ರತ್ನಾ ಪೂಜಾರಿ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಉಪಾಧ್ಯಕ್ಷೆ ಪುಷ್ಪಾ ಕೆ.ಹಂದಟ್ಟು ಪ್ರಾಸ್ತಾವಿಕ ಮಾತನಾಡಿದರು. ಸಂಚಾಲಕಿ ಸುಜಾತಾ ಎಂ.ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶಕೀಲಾ ಎನ್.ಪೂಜಾರಿ ವಂದಿಸಿದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಹಿಡಿ ಕಡ್ಡಿ ನೆಯುವುದು, ಹಲಸಿನ ಕಡ್ಬು ಕೊಟ್ಟೆ ರಚನೆ, ಸಂಗೀತ ಕುರ್ಚಿ, ಮಡಕೆ ಒಡೆಯುವ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆ ಗಮನ ಸೆಳೆದವು.