ಯುವವಾಹಿನಿ ಪಡುಬಿದ್ರಿ ಘಟಕದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭದಲ್ಲಿ ಅಶೋಕ್ ಕುಮಾರ್ ಪಡ್ಪು ನೂತನ ಸಮಿತಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.  
ಜಿಲ್ಲೆ

ತೆರೆಮರೆಯಲ್ಲಿ ಸಮಾಜಮುಖಿ ಕಾರ್ಯ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಯುವವಾಹಿನಿ ಸಂಘಟನೆ ತೆರೆಮರೆಯಲ್ಲಿ ಹಲವಾರು ಸಮಾಜಮುಖಿ ಕಾರ್ಯ ಮಾಡುತ್ತಿದ್ದು, ಯುವಕರನ್ನು ಸರಿ ದಾರಿಯಲ್ಲಿ ಸಾಗುವ ಪಥ ತೋರಿಸುವ ಸಂಸ್ಥೆಯಾಗಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ವೈ.ಸುಧೀರ್ ಕುಮಾರ್ ಹೇಳಿದರು.

ಪಡುಬಿದ್ರಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಭಾನುವಾರ ಯುವವಾಹಿನಿ ಪಡುಬಿದ್ರಿ ಘಟಕದ 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು ನೂತನ ಸಮಿತಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಅಧ್ಯಕ್ಷ ಅಶ್ವಥ್ ಎಸ್. ನಿಯೋಜಿತ ಅಧ್ಯಕ್ಷೆ ಶಶಿಕಲಾ ಯಶೋದರ್ ಮತ್ತು ಕಾರ್ಯದರ್ಶಿ ನಿಖಿಲ್ ಪೂಜಾರಿ ನಿಯೋಜಿತ ಕಾರ್ಯದರ್ಶಿ ಸುಜಾತಾ ಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಯುವವಾಹಿನಿ ಪಡುಬಿದ್ರಿ ಘಟಕ ಅಧ್ಯಕ್ಷ ಅಶ್ವಥ್ ಎಸ್. ಅಧ್ಯಕ್ಷತೆ ವಹಿಸಿದ್ದರು. ವಕೀಲ ಅಶೋಕ್ ಎಸ್. ಪೂಜಾರಿ, ಯುವ ಉದ್ಯಮಿ ಸುಭಾಷ್ ಕುಮಾರ್ ನಂದಳಿಕೆ, ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಭಾರತಿ ಭಾಸ್ಕರ್ ಉಪಸ್ಥಿತರಿದ್ದರು. ಚೈತ್ರಾ ಮನೋಹರ್ ಮತ್ತು ಉಷಾ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿವೇತನ ವಿತರಣೆ

ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 3ನೇ ರ‌್ಯಾಂಕ್ ಪಡೆದ ಸಮರ್ಥ್ ಆರ್.ಜೋಶಿ, 5ನೇ ರ‌್ಯಾಂಕ್ ಪಡೆದ ಚಿನ್ಮಯಿ ಪೈ, ಸ್ನಾತ್ತಕೋತ್ತರ ಆಯುರ್ವೇದ ವೈದ್ಯಕೀಯ ಶಿಕ್ಷಣದಲ್ಲಿ 6ನೇ ರ‌್ಯಾಂಕ್ ಗಳಿಸಿದ ಐಶ್ವರ್ಯ ಸಿ.ಅಂಚನ್, ಜೇಸಿ ಸಾಧನಶ್ರೀ ಪ್ರಶಸ್ತಿ ಪುರಸ್ಕೃತ ಯಶೋದಾ, ಎಂಬಿಎ ಪದವಿ ಗಳಿಸಿದ ಪವಿತ್ರಾ, ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಉನ್ನತ ಶ್ರೇಣಿ ತೇರ್ಗಡೆಯಾದವರನ್ನು ಸನ್ಮಾನಿಸಲಾಯಿತು. ಕಲಿಕಾ ಪ್ರೋತ್ಸಾಹಕ ವಿದ್ಯಾರ್ಥಿವೇತನ ವಿತರಿಸಲಾಯಿತು. ಕೇಂದ್ರ ಸಮಿತಿ ಉಪಾಧ್ಯಕ್ಷರು, ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರನ್ನು ಗೌರವಿಸಲಾಯಿತು.