ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದೇವರ ಪುನಃ ಪ್ರತಿಷ್ಠಾಪನಾ ವರ್ಧಂತಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ನಡೆಯಿತು.
ಬೆಳಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಧಾರ್ಮಿಕ ಅನುಷ್ಠಾನ ಪ್ರಾರಂಭಗೊಂಡು, ಬಳಿಕ ದೇವರಿಗೆ ಶತಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಮಹಾಸಂತರ್ಪಣೆ ದೇವಳ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ನಡೆಯಿತು. ರಾತ್ರಿ ಊರಿನಲ್ಲಿ ಉತ್ಸವ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ನೆರವೇರಿತು. ನಗರ್ ನಾಯಕ್ ಕುಟುಂಬಸ್ಥರು ಸೇವೆ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನ ಆಡಳಿತ ಮಂಡಳಿ ಜಿ.ವೆಂಕಟೇಶ ನಾಯಕ್, ಜಿ.ವೇದವ್ಯಾಸ ಕೆ.ಆಚಾರ್ಯ, ಕೆ.ಗೋಪಾಲಕೃಷ್ಣ ನಾಯಕ್, ದೇವಳದ ತಾಂತ್ರಿಕ ಜಿ.ವಸಂತ ಭಟ್, ಪುರೋಹಿತರು, ಅರ್ಚಕರು, ಆಡಳಿತ ಮಂಡಳಿ ಸದಸ್ಯರು, ಭಕ್ತರು, ಜಿಎಸ್‌ಬಿ ಸಮಾಜ ಬಾಂಧವರು ಮತ್ತಿತರರು ಉಪಸ್ಥಿತರಿದ್ದರು.