madhyama taragati 
ಜಿಲ್ಲೆ

ದ್ವಿಭಾಷಾ ಮಾಧ್ಯಮ ತರಗತಿಗಳ ಉದ್ಘಾಟನೆ

Karthika K.S

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಂಗವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ 1ನೇ ತರಗತಿಯಿಂದ ದ್ವಿಭಾಷಾ ಮಾಧ್ಯಮ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಉದ್ಘಾಟಿಸಿದರು.

ಹೆಂಗವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಯೋಗೇಶ್ ಮಡಿವಾಳ, ಪಂಚಾಯಿತಿ ಸದಸ್ಯರಾದ ಸಂತೋಷ್‌ಕುಮಾರ್ ಶೆಟ್ಟಿ, ರಘುರಾಮ್ ಶೆಟ್ಟಿ, ವಸುಂಧರ ಹೆಗ್ಡೆ, ಗಿರಿಜಾ ಕುಲಾಲ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಬೇಬಿ ಶೆಡ್ತಿ, ದಾನಿಗಳಾದ ನವೀನ್‌ಚಂದ್ರ ಹೆಗ್ಡೆ, ಶ್ರೀಧರ್ ಭಾಗವತ, ನಿವೃತ್ತ ಮುಖ್ಯಶಿಕ್ಷಕ ಶ್ರೀಧರ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಹಾಲಾಡಿ ವಲಯದ ಶಿಕ್ಷಣ ಸಂಯೋಜಕ ಶೇಖರ್ ಯು., ಶಾಲಾ ಮುಖ್ಯಶಿಕ್ಷಕ ನಾರಾಯಣ, ಅಧ್ಯಾಪಕರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಹಳೇ ವಿದ್ಯಾರ್ಥಿಗಳು, ಪಾಲಕರು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.