ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಕಾರ್ಯಾಲಯವನ್ನು ರಘುಪತಿ ಭಟ್ ಉದ್ಘಾಟಿಸಿದರು. ಬಿ.ವೈ.ರಾಘವೇಂದ್ರ, ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಎಸ್.ಎನ್.ಚನ್ನಬಸಪ್ಪ, ಟಿ.ಡಿ.ಮೇಘರಾಜ್, ಗಿರೀಶ್ ಪಟೇಲ್, ಹರತಾಳು ಹಾಲಪ್ಪ, ಗಾಯತ್ರಿ ದೇವಿ ಮುಂತಾದವರಿದ್ದರು. 
ಜಿಲ್ಲೆ

ಬಿಜೆಪಿ ಚುನಾವಣೆ ಕಾರ್ಯಾಲಯ ಉದ್ಘಾಟನೆ

ಅರವಿಂದ ಅಕ್ಲಾಪುರ

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಪ್ರಭಾರಿ ರಘುಪತಿ ಭಟ್ ಸೋಮವಾರ ಬಿಜೆಪಿ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಗೆಲ್ಲಿಸಲು ನಾವೆಲ್ಲರೂ ಸೇರಿಕೊಂಡು ಕೆಲಸ ಮಾಡಬೇಕು. ಅದಕ್ಕೆ ಈ ಚುನಾವಣಾ ಕಾರ್ಯಾಲಯದ ಉದ್ಘಾಟನೆ ನಾಂದಿಯಾಗಲಿ ಎಂದು ಆಶಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಕಾರ್ಯದರ್ಶಿ ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸ್ಪಪ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮುಂತಾದವರಿದ್ದರು.