ವಿಜಯಪುರದ ಬಿಡಿಇ ಸಂಸ್ಥೆಯ ಬಾಲಕಿಯರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎನ್.ಬಗಲಿ ಉದ್ಘಾಟಿಸಿದರು. ಬಿಡಿಇ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಕುಲಕರ್ಣಿ ಮಮದಾಪುರ, ಪ್ರಾಚಾರ್ಯೆ ಪಿ.ಟಿ.ಕೋಟ್ನಿಸ್, ಸಂಸ್ಥೆಯ ಉಪಾಧ್ಯಕ್ಷ ಎ.ಡಿ.ದೇಶಪಾಂಡೆ, ಜಂಟಿ ಕಾರ್ಯದರ್ಶಿ ಆರ್.ಪಿ.ಚಿಕ್ಕಲಕಿ ಇನ್ನಿತರರಿದ್ದರು.  
ಜಿಲ್ಲೆ

ವಿಜಯಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟನೆ

ವಿಜಯಪುರ : ಸೋಲು-ಗೆಲುವು ಎಲ್ಲರಿಗೂ ಇರುತ್ತದೆ. ಆದರೆ ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎನ್.ಬಗಲಿ ನುಡಿದರು.

ಇಲ್ಲಿನ ಬಿಡಿಇ ಸಂಸ್ಥೆಯ ಬಾಲಕಿಯರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಡಿಇ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಕುಲಕರ್ಣಿ ಮಮದಾಪುರ, ವಿದ್ಯಾರ್ಥಿಗಳು ಶಿಸ್ತು, ಒಳ್ಳೆಯ ಪ್ರಯತ್ನ, ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಚಾರ್ಯೆ ಪಿ.ಟಿ.ಕೋಟ್ನಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಉಪಾಧ್ಯಕ್ಷ ಎ.ಡಿ.ದೇಶಪಾಂಡೆ, ಜಂಟಿ ಕಾರ್ಯದರ್ಶಿ ಆರ್.ಪಿ.ಚಿಕ್ಕಲಕಿ ಹಾಗೂ ಜಿಲ್ಲೆಯ ಎಲ್ಲ ಕಾಲೇಜಿನ ಪ್ರಾಚಾರ್ಯರು, ದೈಹಿಕ ಶಿಕ್ಷಣ ಉಪನ್ಯಾಸಕರು, ಕ್ರೀಡಾಪಟುಗಳು ಭಾಗವಹಿಸಿದ್ದರು.