ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಾರಣಕಟ್ಟೆ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಐಡಿ ಕಾರ್ಡ್ ಮತ್ತು ಬೆಲ್ಟ್‌ಗಳನ್ನು ಟ್ರಸ್ಟ್ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಮಂಜ ವಿತರಿಸಿದರು 
ಜಿಲ್ಲೆ

ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ : ನೋಟ್ಸ್ ಪುಸ್ತಕ, ಸಮವಸ್ತ್ರ, ಐಡಿ ಕಾರ್ಡ್ ಮತ್ತು ಬೆಲ್ಟ್‌ ವಿತರಣೆ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಬೈಂದೂರು

ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅನುಮೋದನೆಗೊಂಡ ಆಂಗ್ಲ ಮಾಧ್ಯಮ ತರಗತಿಯನ್ನು ಮಾರಣಕಟ್ಟೆ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಮಂಜ ಉದ್ಘಾಟಿಸಿ ನೋಟ್ಸ್ ಪುಸ್ತಕ, ಸಮವಸ್ತ್ರ, ಐಡಿ ಕಾರ್ಡ್ ಮತ್ತು ಬೆಲ್ಟ್‌ಗಳನ್ನು ವಿತರಿಸಿದರು.

ರಾಷ್ಟ್ರಮಟ್ಟದ ಕ್ರೀಡಾಪಟು ಕುಮಾರ ನಿತೇಶ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಂದ್ರ ಆಲೂರು ಅವರನ್ನು ಸನ್ಮಾನಿಸಲಾಯಿತು. ಚಿಗುರು ಸಾಂಸ್ಕೃತಿಕ ಸಂಘದ ಬ್ಯಾನರ್ ಅನ್ನು ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಮತ್ತು ಯಕ್ಷಗಾನ ಗುರು ಸುರೇಂದ್ರ ಆಲೂರು ಬಿಡುಗಡೆ ಮಾಡಿದರು.

ಆಲೂರು ಗ್ರಾಪಂ ಅಧ್ಯಕ್ಷ ರಾಜೇಶ್ ಎನ್.ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಮಂಜಯ್ಯ ಶೆಟ್ಟಿ, ಆಲೂರು ಗ್ರಾಪಂ ಉಪಾಧ್ಯಕ್ಷೆ ಸಿಂಗಾರಿ, ಸದಸ್ಯರಾದ ರವಿ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಜಯಲಕ್ಷ್ಮೀ ಗಾಣಿಗ, ಉಪ್ರಳ್ಳಿ ಕಾಳಿಕಾಂಬ ದೇವಸ್ಥಾನ ಆಡಳಿತ ಮೊಕ್ತೇಸರ ಕಳಿ ಚಂದ್ರಯ್ಯ ಆಚಾರ್, ಎಸ್‌ಡಿಎಂಸಿ ಅಧ್ಯಕ್ಷ ದತ್ತಾತ್ರೇಯ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕ ನಾರಾಯಣ ಶೆಟ್ಟಿ, ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯಶಿಕ್ಷಕ ಶಶಿಧರ ಶೆಟ್ಟಿ, ಪ್ರಭಾರ ಮುಖ್ಯಶಿಕ್ಷಕಿ ಲೀನಾ ಕಾರ್ಡಿನ, ಎಸ್‌ಡಿಎಂಸಿ ಸದಸ್ಯರು, ಪಾಲಕರು ಉಪಸ್ಥಿತರಿದ್ದರು. ಸಹಶಿಕ್ಷಕರಾದ ದಿನಕರ ದೇವಾಡಿಗ ಸ್ವಾಗತಿಸಿದರು. ನಾಗರತ್ನಾ ಜಿ. ನಿರೂಪಿಸಿದರು. ವೀರೇಂದ್ರ ಜೋಗಿ ಪ್ರಸ್ತಾವಿಸಿದರು.