ಇಳಕಲ್ಲದ ಡಿ.ದೇವರಾಜ ಅರಸು ಬಾಲಕಿಯರ ವಸತಿ ನಿಲಯವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಸುಧಾರಾಣಿ ಸಂಗಮ, ಶರಣಪ್ಪ ಆಮದಿಹಾಳ, ರಾಘು ಚಿಂಚಮಿ ಮತ್ತಿತರರಿದ್ದಾರೆ. 
ಜಿಲ್ಲೆ

ಬಾಲಕಿಯರ ವಸತಿ ನಿಲಯ ಉದ್ಘಾಟನೆ

ವಿನಯ ಆಶೋಕ ನಾಯ್ಕ

ಇಳಕಲ್ಲ(ಗ್ರಾ): ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಸಾಕಷ್ಟು ಸೌಲಭ್ಯ ಒದಗಿಸಲಾಗಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ನಗರದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ದೇವರಾಜ ಅರಸು ಬಾಲಕಿಯರ ವಸತಿ ನಿಲಯವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, 125 ವಿದ್ಯಾರ್ಥಿನಿಯರಿಗೆ ಇಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಸುರಕ್ಷತೆಗಾಗಿ ಕಾಂಪೌಂಡ್ ನಿರ್ಮಿಸಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆದು ವಿದ್ಯಾಭ್ಯಾಸ ಮಾಡಬಹುದು ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘು ಚಿಂಚಮಿ, ಶರಣಪ್ಪ ಆಮದಿಹಾಳ, ಮುತ್ತು ನಾಲವಾಡದ, ನೀಲಕಂಠ ಶ್ಯಾವಿ, ಶಬ್ಬೀರ ಬಾಗವಾನ, ಕಾಂಗ್ರೆಸ್ ಮುಖಂಡ ವಿಠ್ಠಲ ಜಕ್ಕಾ ಮತ್ತಿತರರಿದ್ದರು.